ಯೆರೆಮೀಯ 30:3 - ಪರಿಶುದ್ದ ಬೈಬಲ್3 ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.