Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:8 - ಪರಿಶುದ್ದ ಬೈಬಲ್‌

8 ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 (ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:8
16 ತಿಳಿವುಗಳ ಹೋಲಿಕೆ  

ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.


ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”


ಯೆಹೋವನು ನನಗೆ ಹೀಗೆ ಹೇಳಿದನು: “ನೀನು ಮರದ ಕಂಬದಿಂದ ಕೆಲವು ನೊಗಗಳನ್ನು ಮಾಡಿ ನಿನ್ನ ಕತ್ತಿನ ಹಿಂಬದಿಯ ಮೇಲೆ ಇಟ್ಟುಕೋ.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ಯೆರೆಮೀಯನು ತನ್ನ ಹೆಗಲಿನ ಮೇಲೆ ನೊಗವನ್ನು ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನ್ನು ತೆಗೆದುಕೊಂಡು ಆ ನೊಗವನ್ನು ಮುರಿದುಹಾಕಿದನು.


ಯೆಹೋವನು ಯೆರೆಮೀಯನಿಗೆ ಹೀಗೆಂದನು: “ಹೋಗಿ ಹನನ್ಯನಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ. ನೀನು ಮರದ ನೊಗವನ್ನು ಮುರಿದೆ, ಆದರೆ ನಾನು ಮರದ ನೊಗಕ್ಕೆ ಬದಲಾಗಿ ಕಬ್ಬಿಣದ ನೊಗವನ್ನು ಮಾಡುವೆನು.


ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.


ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.


ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.


ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.


ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು