ಯೆರೆಮೀಯ 31:16 - ಪರಿಶುದ್ದ ಬೈಬಲ್16 ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಇಂತೆನ್ನುತ್ತಾನೆ - ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.