Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:21 - ಪರಿಶುದ್ದ ಬೈಬಲ್‌

21 “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:21
23 ತಿಳಿವುಗಳ ಹೋಲಿಕೆ  

ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ಏನು ನಡೆಯುತ್ತಿದೆಂಬುದರ ಬಗ್ಗೆ ಯೋಚಿಸಿರಿ.


ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.


ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.


ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


“ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.


ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ.’ ‘ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು