ಯೆರೆಮೀಯ 31:23 - ಪರಿಶುದ್ದ ಬೈಬಲ್23 ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.