ಯೆರೆಮೀಯ 31:27 - ಪರಿಶುದ್ದ ಬೈಬಲ್27 ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬಿತ್ತುವ ದಿನಗಳು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.