Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:28 - ಪರಿಶುದ್ದ ಬೈಬಲ್‌

28 ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:28
24 ತಿಳಿವುಗಳ ಹೋಲಿಕೆ  

ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.


ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಯೆರೆಮೀಯನೇ, “ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.


ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.


‘ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು.


ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.


ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!


ಯಾಕೆಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು. ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.


ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.


“ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.


ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೊ ಎಂಬುದಾಗಿ ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.


‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.


ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.


ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದ್ದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.


ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದ್ದರಿಂದ ಭಯಪಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು