Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:29 - ಪರಿಶುದ್ದ ಬೈಬಲ್‌

29 “‘ಹುಳಿದ್ರಾಕ್ಷಿ ತಿಂದವರು ತಂದೆತಾಯಿಗಳು! ರುಚಿ ಕಂಡದ್ದು ಅವರ ಮಕ್ಕಳು!’ ಎಂಬ ಗಾದೆಯನ್ನು ಆಗ ಜನರು ಬಳಸುವ ಅವಶ್ಯಕತೆ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆ ಕಾಲ ಬಂದಾಗ ಜನರು, ‘ಹೆತ್ತವರು ಹುಳಿದ್ರಾಕ್ಷೆಯನ್ನು ತಿಂದರು. ಆದರೆ ಮಕ್ಕಳ ಹಲ್ಲುಗಳು ಚಳಿತುಹೋದವು’ ಎಂದು ಹೇಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂದು ಆ ಕಾಲದಲ್ಲಿ ಜನರು ಮತ್ತೆ ಅನ್ನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆ ದಿನಗಳಲ್ಲಿ, “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:29
5 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ಪ್ರತಿಯೊಬ್ಬನು ತನ್ನ ಪಾಪದ ನಿಮಿತ್ತವೇ ಸಾಯುವನು. ಹುಳಿದ್ರಾಕ್ಷಿಯನ್ನು ತಿಂದವನೇ ಅದರ ರುಚಿಯನ್ನು ಕಾಣುವನು.”


“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.


‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು