Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:31 - ಪರಿಶುದ್ದ ಬೈಬಲ್‌

31 ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:31
24 ತಿಳಿವುಗಳ ಹೋಲಿಕೆ  

ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.


ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.


ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.


ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.


ಯೆಹೋವನು ವಾಗ್ದಾನಗಳನ್ನು ಒಳಗೊಂಡ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾತ್ರ ಮಾಡದೆ ಇಲ್ಲಿ ಕೂಡಿಬಂದಿರುವ ಎಲ್ಲರೊಂದಿಗೂ ಮಾಡುತ್ತಾನೆ.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ಬೇರೊಬ್ಬ ಯಾಜಕನು ಬಂದರೆ, ಆಗ ಧರ್ಮಶಾಸ್ತ್ರವು ಬದಲಾಗಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು