ಯೆರೆಮೀಯ 31:32 - ಪರಿಶುದ್ದ ಬೈಬಲ್32 ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.