ಯೆರೆಮೀಯ 31:37 - ಪರಿಶುದ್ದ ಬೈಬಲ್37 ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯೆಹೋವನು ಹೀಗೆನ್ನುತ್ತಾನೆ - ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಾನು ಆ ವಂಶವನ್ನು ನಿರಾಕರಿಸಿಬಿಟ್ಟೇನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”