Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:1 - ಪರಿಶುದ್ದ ಬೈಬಲ್‌

1 ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಬಂದ ಸಂದೇಶವಿದು. ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೇ ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಹತ್ತನೆಯ ವರುಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:1
9 ತಿಳಿವುಗಳ ಹೋಲಿಕೆ  

ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಕಾಲ ರಾಜ್ಯಭಾರ ಮಾಡಿದನು.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಈ ಸಂದೇಶ ಬಂದಿತು. ಚಿದ್ಕೀಯನು ರಾಜನಾಗಿದ್ದ ಯೋಷೀಯನ ಮಗ.


ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.


ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ 832.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು