ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.