ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.