ಯೆರೆಮೀಯ 32:15 - ಪರಿಶುದ್ದ ಬೈಬಲ್15 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’ ಅಧ್ಯಾಯವನ್ನು ನೋಡಿ |
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”