ಯೆರೆಮೀಯ 32:17 - ಪರಿಶುದ್ದ ಬೈಬಲ್17 “ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿ |
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”