Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:18 - ಪರಿಶುದ್ದ ಬೈಬಲ್‌

18 ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:18
33 ತಿಳಿವುಗಳ ಹೋಲಿಕೆ  

ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ


ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”


ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.


ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”


“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.


ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.


“ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಹೀಗೆನ್ನುತ್ತಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು