ಯೆರೆಮೀಯ 32:19 - ಪರಿಶುದ್ದ ಬೈಬಲ್19 ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ. ಅಧ್ಯಾಯವನ್ನು ನೋಡಿ |
“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.