ಯೆರೆಮೀಯ 32:2 - ಪರಿಶುದ್ದ ಬೈಬಲ್2 ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತ್ತು, ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.