ಯೆರೆಮೀಯ 32:20 - ಪರಿಶುದ್ದ ಬೈಬಲ್20 ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಈ ದಿನದವರೆಗೆ ಇಸ್ರಾಯೇಲ್ಯರಲ್ಲಿಯೂ ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿ; ಅದು ಈಗಲೂ ಸ್ಥಿರವಾಗಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿ |
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”