Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:21 - ಪರಿಶುದ್ದ ಬೈಬಲ್‌

21 ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಭುಜಪರಾಕ್ರಮವನ್ನು ತೋರಿಸಿ ಶಿಕ್ಷಾಹಸ್ತವನ್ನು ಎತ್ತಿ ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:21
18 ತಿಳಿವುಗಳ ಹೋಲಿಕೆ  

ಆಮೇಲೆ ಯೆಹೋವನು ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ.


ಇಸ್ರೇಲಿಗೆ ಸಮಾನವಾದ ಜನಾಂಗ ಭೂಲೋಕದಲ್ಲಿ ಎಲ್ಲಿದೆ? ನೀನು ಇಂಥ ಅದ್ಭುತಕಾರ್ಯಗಳನ್ನು ಮಾಡಿರುವುದು ಇಸ್ರೇಲ್ ಜನಾಂಗಕ್ಕಾಗಿಯೇ. ನೀನು ನಮ್ಮನ್ನು ಈಜಿಪ್ಟಿನಿಂದ ಹೊರತಂದು ಸ್ವತಂತ್ರರನ್ನಾಗಿ ಮಾಡಿದೆ. ಹೀಗೆ ನೀನು ನಿನ್ನ ಹೆಸರನ್ನು ಪ್ರಖ್ಯಾತಿಮಾಡಿದೆ. ನೀನು ನಿನ್ನ ಜನರ ಮುಂದೆ ಹೋಗುತ್ತಾ, ಅನ್ಯಜನರು ತಮ್ಮ ದೇಶವನ್ನು ಬಿಟ್ಟುಹೋಗುವಂತೆ ಮಾಡಿದೆ.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.


ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು.


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.


ಆ ಮಹತ್ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪ್ರಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ.


ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು