ಯೆರೆಮೀಯ 32:22 - ಪರಿಶುದ್ದ ಬೈಬಲ್22 “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.