Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:23 - ಪರಿಶುದ್ದ ಬೈಬಲ್‌

23 ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:23
32 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.


ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ನೀನು ಅವರಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿಮಗೆ ನನ್ನ ಧರ್ಮೋಪದೇಶಗಳನ್ನು ಕೊಟ್ಟಿದ್ದೇನೆ. ನೀವು ಅವುಗಳನ್ನು ಪಾಲಿಸಬೇಕು; ಅನುಸರಿಸಬೇಕು.


ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”


ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು