ಯೆರೆಮೀಯ 32:24 - ಪರಿಶುದ್ದ ಬೈಬಲ್24 “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ. ಅಧ್ಯಾಯವನ್ನು ನೋಡಿ |
“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.