Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:28 - ಪರಿಶುದ್ದ ಬೈಬಲ್‌

28 ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:28
11 ತಿಳಿವುಗಳ ಹೋಲಿಕೆ  

ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.


“‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”


ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.


ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.


ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು