Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:30 - ಪರಿಶುದ್ದ ಬೈಬಲ್‌

30 ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:30
25 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನ್ನು ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನ್ನು ಉಂಟುಮಾಡಿತು.”


“ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.


“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.


ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.


ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು