ಯೆರೆಮೀಯ 32:31 - ಪರಿಶುದ್ದ ಬೈಬಲ್31 “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪ ರೋಷಗಳಿಗೆ ಆಸ್ಪದವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.