ಯೆರೆಮೀಯ 32:32 - ಪರಿಶುದ್ದ ಬೈಬಲ್32 ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇವಿುನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲ್ಯರೂ ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರೂ, ಯೆಹೂದದ ಮಕ್ಕಳೂ, ಅವರೂ, ಅವರ ಅರಸರೂ, ಅವರ ಪ್ರಧಾನರೂ, ಅವರ ಯಾಜಕರೂ, ಅವರ ಪ್ರವಾದಿಗಳೂ, ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದರು ಅಧ್ಯಾಯವನ್ನು ನೋಡಿ |
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.