ಯೆರೆಮೀಯ 32:33 - ಪರಿಶುದ್ದ ಬೈಬಲ್33 “ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.