36 “‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
36 ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
36 ಹೀಗಿರಲು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ -
36 “ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ:
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.
ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.