ಯೆರೆಮೀಯ 32:40 - ಪರಿಶುದ್ದ ಬೈಬಲ್40 “‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.