ಯೆರೆಮೀಯ 32:41 - ಪರಿಶುದ್ದ ಬೈಬಲ್41 ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.