42 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’