ಯೆರೆಮೀಯ 32:43 - ಪರಿಶುದ್ದ ಬೈಬಲ್43 ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಜನರಿಲ್ಲದೆ, ಪ್ರಾಣಿಗಳಿಲ್ಲದೆ, ಪಾಳುಬಿದ್ದು ಬಾಬಿಲೋನಿಯರ ಕೈವಶವಾಗಿದೆ ಎನ್ನಲಾಗುವ ಈ ನಾಡಿನಲ್ಲಿ ಹೊಲಗದ್ದೆಗಳ ವ್ಯವಹಾರ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಜನ ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು. ಅಧ್ಯಾಯವನ್ನು ನೋಡಿ |
“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”