Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:5 - ಪರಿಶುದ್ದ ಬೈಬಲ್‌

5 ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:5
20 ತಿಳಿವುಗಳ ಹೋಲಿಕೆ  

ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


“‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು.


ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ.


ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.


ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ.


ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ:


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ನಿಮ್ಮ ನಾಯಕನು ಗೋಡೆಯಲ್ಲಿ ರಂಧ್ರ ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಯಾವ ಕಡೆಗೆ ಹೋಗುತ್ತಿದ್ದಾನೆಂದು ಅವನ ಕಣ್ಣುಗಳಿಗೆ ಕಾಣಿಸದು.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು