ಯೆರೆಮೀಯ 32:7 - ಪರಿಶುದ್ದ ಬೈಬಲ್7 ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು - ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು. ಅಧ್ಯಾಯವನ್ನು ನೋಡಿ |