ಯೆರೆಮೀಯ 32:8 - ಪರಿಶುದ್ದ ಬೈಬಲ್8 “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು - ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು, ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.
“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”