ಯೆರೆಮೀಯ 33:10 - ಪರಿಶುದ್ದ ಬೈಬಲ್10 “‘ನಮ್ಮ ದೇಶವು ಒಂದು ಬರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಬೇಗನೆ ಅಲ್ಲಿ ಧ್ವನಿಕೇಳಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅಧ್ಯಾಯವನ್ನು ನೋಡಿ |