ಯೆರೆಮೀಯ 33:11 - ಪರಿಶುದ್ದ ಬೈಬಲ್11 ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.