Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:12 - ಪರಿಶುದ್ದ ಬೈಬಲ್‌

12 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತವೂ ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವದಕ್ಕೆ ಮತ್ತೆ ಆಸರೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:12
17 ತಿಳಿವುಗಳ ಹೋಲಿಕೆ  

ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.


ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


“ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.


ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.


ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


“ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳುಬಿದ್ದಿದೆ.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು