Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:17 - ಪರಿಶುದ್ದ ಬೈಬಲ್‌

17 ಯೆಹೋವನು ಹೀಗೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ದಾವೀದನ ವಂಶವು ನಿಂತುಹೋಗದೆ ಆ ಸಂತಾನದವರು ಇಸ್ರಾಯೇಲ್ಯರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:17
15 ತಿಳಿವುಗಳ ಹೋಲಿಕೆ  

ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಈಗಲಾದರೋ ಇಸ್ರೇಲಿನ ದೇವರಾದ ಯೆಹೋವನೇ, ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಾಡಿದ ಇತರ ವಾಗ್ದಾನಗಳನ್ನು ಈಗ ನೆರವೇರಿಸು. ನೀನು ನನ್ನ ತಂದೆಗೆ, ‘ದಾವೀದನೇ, ನೀನು ನನ್ನನ್ನು ಅನುಸರಿಸಿದಂತೆ ನಿನ್ನ ಮಕ್ಕಳೂ ಎಚ್ಚರಿಕೆಯಿಂದ ನನ್ನನ್ನು ಅನುಸರಿಸಿದರೆ, ನಿನ್ನ ಕುಟುಂಬದಲ್ಲಿನ ಯಾವನಾದರೊಬ್ಬನು ಇಸ್ರೇಲಿನ ಜನರನ್ನು ಆಳುತ್ತಲೇ ಇರುವನು’ ಎಂದು ಹೇಳಿದೆ.


ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”


ನನ್ನ ಸಂತತಿಯವರನ್ನು ಆಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಂದು ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನಾಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವಾದ ಹೊಂದಿಕೊಳ್ಳುವರು!” ಎಂದು ಪ್ರಾರ್ಥಿಸಿದನು.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


“‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.


ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು