ಯೆರೆಮೀಯ 33:18 - ಪರಿಶುದ್ದ ಬೈಬಲ್18 ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ” ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.