Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:22 - ಪರಿಶುದ್ದ ಬೈಬಲ್‌

22 ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:22
23 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.


ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”


ಯೆರೆಮೀಯನು ಯೆಹೋವನಿಂದ ಈ ಸಂದೇಶವನ್ನು ಪಡೆದನು:


ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತುಕೊಂಡವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನಸಮೂಹವು ಅಲ್ಲಿತ್ತು.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


“ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು