ಯೆರೆಮೀಯ 33:3 - ಪರಿಶುದ್ದ ಬೈಬಲ್3 ‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’ ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.