ಯೆರೆಮೀಯ 33:4 - ಪರಿಶುದ್ದ ಬೈಬಲ್4 ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.