ಯೆರೆಮೀಯ 33:6 - ಪರಿಶುದ್ದ ಬೈಬಲ್6 “‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.