ಯೆರೆಮೀಯ 34:1 - ಪರಿಶುದ್ದ ಬೈಬಲ್1 ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ: ಅಧ್ಯಾಯವನ್ನು ನೋಡಿ |
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”