ಯೆರೆಮೀಯ 34:13 - ಪರಿಶುದ್ದ ಬೈಬಲ್13 ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ, ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.