ಯೆರೆಮೀಯ 34:14 - ಪರಿಶುದ್ದ ಬೈಬಲ್14 ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.