ಯೆರೆಮೀಯ 34:16 - ಪರಿಶುದ್ದ ಬೈಬಲ್16 ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ. ಅಧ್ಯಾಯವನ್ನು ನೋಡಿ |
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.